ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಹರಿಯಬಿಡಲಾಗುತ್ತಿದೆ.
ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಠಿಯಾಗಿದೆ. ನದಿ ಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಇನ್ನು ಹಾರಂಗಿ ಬಳಿಯ ಹುದಗೂರುವಿಗೆ ತೆರಳುವ ಸೇತುವೆ ಮುಳಗಡೆಯಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಹಲವು ಕಡೆ ಮರಗಳು ಧರೆಗೆ ಉರುಳಿಬಿದ್ದಿವೆ. ಅಲ್ಲದೆ ವಿದ್ಯುತ್ ಕಂಬಗಳು ಕೂಡ ನೆಲಕ್ಕುರುಳಿದ್ದು, ಇದರಿಂದ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕಕಡಿತಗೊಂಡಿದೆ.





