Mysore
28
overcast clouds

Social Media

ಬುಧವಾರ, 25 ಜೂನ್ 2025
Light
Dark

ಅವಧಿಗೂ ಮುನ್ನವೇ ಹಾರಂಗಿ ಜಲಾಶಯ ಬಹುತೇಕ ಭರ್ತಿ

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ.

ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ:- ಕ್ಷಮೆ ಕೇಳದೇ ಮತ್ತೆ ಉದ್ಧಟತನ ಮೆರೆದ ನಟ ಕಮಲ್‌ ಹಾಸನ್‌

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ 767.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 339.58 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.50ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಬಹುತೇಕ ಭರ್ತಿಯಾಗಿದೆ.

Tags:
error: Content is protected !!