ಕೊಡಗು

ಮಡಿಕೇರಿಯಲ್ಲಿ ಮಳೆ ನೀರಿನೊಂದಿಗೆ ಕೊಚ್ಚಿ ಬಂದ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಗಳು

ಮಡಿಕೇರಿ : ರಾಜ್ಯದಲ್ಲಿ ಕಳೆದ ೨ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಪಾತಗಳು ತುಂಬಿ ತುಳುತ್ತಿವೆ. ಇನ್ನು ಕೊಡಗು ಭಾಗದಲ್ಲೂ ಭಾರೀ ಮಳೆಯಾಗಿದ್ದು, ಒಂದೆಡೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೆ ಮಡಿಕೇರಿಯಲ್ಲೂ ಸುರಿಯುತ್ತಿರುವ ವರ್ಷದ ಮೊದಲ ಮಳೆಗೆ ಕಾಲುವೆಗಳು ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.

ಮಡಿಕೇರಿಯ ಕಾಲುವೆಯೊಂದರಲ್ಲಿ ಮಳೆಯ ನೀರಿನ ಜೊತೆಗೆ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲ್‌ ಗಳು, ಕವರ್‌ ಗಳು ತೇಲಿ ಬರುತ್ತಿದ್ದು, ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಇದು ಪ್ರಕೃತಿಗೆ ಜನರು ಕೊಟ್ಟ ಕೊಡುಗೆ ಎಂದು ಟೀಕಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗುತ್ತಿದ್ದು, ಪ್ಲಾಸ್ಟಿಕ್‌ ಬಾಟಲ್‌ ಕಡಿಮೆ ಬಳಸಿ ಎಂದು ನೆಟ್ಟಿಗರು ಸಹ ಕಮೆಂಟ್‌ ಮಾಡಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

10 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

12 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

12 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

12 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

12 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

12 hours ago