ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಪ್ರವೀಣ್ ಎಂಬುವರಿಗೆ ಸೇರಿದ ವಾಸದ ಮನೆಯಾಗಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ. ಗ್ರಾಮಸ್ಥರ ಸಹಾಯದಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.





