Mysore
24
mist

Social Media

ಭಾನುವಾರ, 22 ಫೆಬ್ರವರಿ 2026
Light
Dark

ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ

ಕೊಡಗು:  ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.

ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗಾಳಿ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ನಾಲ್ಕು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!