ಕೊಡಗು: ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಗಾಳಿ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ನಾಲ್ಕು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…