ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ.
ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.
ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.
ಕೊಡ್ಲಿಪೇಟೆ – ಶನಿವಾರಸಂತೆ ಮಾರ್ಗದಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇದನ್ನೂ ಓದಿ:- ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ
ದುಬಾರೆ ಸಮೀಪದ ಬಾಳುಗೋಡುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದಿದ್ದು, ಅಲ್ಲೂ ಕೂಡ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ.
ಇನ್ನೂ ಹಲವೆಡೆಗಳಲ್ಲಿ ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.





