Mysore
23
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ಕೊಡಗಿನಲ್ಲಿ ಮುಂದುವರಿದ ಮಳೆಯ ಆರ್ಭಟ: ನಾಳೆಯೂ ರೆಡ್‌ ಅಲರ್ಟ್‌ ಘೋಷಣೆ

kodagu rain

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ನಾಳೆಯೂ ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Tags:
error: Content is protected !!