ಕೊಡಗು

ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ.

ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.‌

ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.

ಕೊಡ್ಲಿಪೇಟೆ – ಶನಿವಾರಸಂತೆ ಮಾರ್ಗದಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇದನ್ನೂ ಓದಿ:- ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ

ದುಬಾರೆ ಸಮೀಪದ ಬಾಳುಗೋಡುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದಿದ್ದು, ಅಲ್ಲೂ ಕೂಡ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ‌.

ಇನ್ನೂ ಹಲವೆಡೆಗಳಲ್ಲಿ ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

3 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

3 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

5 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

7 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

10 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago