Mysore
27
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ನಾಗರಿಕರಿಗಾಗಿ ಸಹಾಯವಾಣಿ ಆರಂಭ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ಅನೇಕ ಸೇತುವೆಗಳು ಕುಸಿದು ಬಿದ್ದಿದ್ದು, ಅನೇಕ ರಸ್ತೆಗಳು ಬಿರುಕು ಬಿಟ್ಟಿವೆ.

ಭಾರೀ ಮಳೆಯಿಂದ ಜೀವನದಿ ಕಾವೇರಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದು, ಅಲ್ಲಲ್ಲಿ ಸಹಾಯವಾಣಿಯನ್ನು ತೆರೆದಿದೆ.

ಈ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪ್ರಕಟಣೆ ಹೊರಡಿಸಿದ್ದು, ಸಮಸ್ಯೆ ಕಂಡು ಬಂದರೆ ತುರ್ತು ಸಂದರ್ಭದಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಆದೇಶ ಹೊರಡಿಸಿದ್ದಾರೆ.

Tags: