ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ.
ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ ಉಬ್ಬಿಕೊಂಡು ಸಂಚಾರಕ್ಕೆ ಸಮಸ್ಯೆಯುಂಟು ಮಾಡುವ ಕರ್ತೋಜಿ ಬಳಿಯ ರಸ್ತೆಯಲ್ಲಿ ಈ ಬಾರಿಯೂ ಅಂತಹದ್ದೇ ಸಮಸ್ಯೆ ಕಾಣಿಸಿಕೊಂಡಿದೆ. ನಿರಂತರ ಮಳೆಯಿಂದ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ಗುಡ್ಡದ ಮಣ್ಣು ನಿಧಾನವಾಗಿ ರಸ್ತೆಯನ್ನಾವರಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳದಲ್ಲಿಯೇ ಜೆಸಿಬಿ ಯಂತ್ರವನ್ನು ಕಾಯ್ದಿರಿಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಘಾಟಿ ರಸ್ತೆಯಲ್ಲಿ ಬೇರೆ ಯಾವುದೇ ಘಾಟಿಯಲ್ಲಿ ಕಾಣಿಸದ ಅಪರೂಪದ ಮತ್ತು ವಿಚಿತ್ರ ಸಮಸ್ಯೆಯೊಂದು ಎದುರಾಗುತ್ತಿದ್ದು, ಪ್ರತಿವರ್ಷ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಕರ್ತೋಜಿ ಬಳಿ ಗುಡ್ಡದಿಂದ ಬರುವ ಮಣ್ಣಿನಿಂದ ರಸ್ತೆ ಉಬ್ಬಿಕೊಳ್ಳುತ್ತಿರುವುದು ಈಗ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕರ್ತೋಜಿಯ ಈ ಸಮಸ್ಯೆಗೆ ಜೆ ಮಾದರಿ ತಡೆಗೋಡೆ ನಿರ್ಮಾಣದಿಂದ ಪರಿಹಾರ ಸಾಧ್ಯ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ವಿಭಾಗದಿಂದ ಕೇಂದ್ರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ. ಸಂಪಾಜೆಯಿಂದ ಬೋಯಿಕೇರಿವರೆಗೆ ಒಟ್ಟು 26 ತಡೆಗೋಡೆಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 21 ತಡೆಗೋಡೆಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…