ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಿನ್ನೆಯಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆಯಿಂದ ಅಲ್ಲಲ್ಲಿ ಭಾರೀ ಹಾನಿಯಾಗಿದೆ. ಭಾರೀ ಮಳೆಗೆ ರಸ್ತೆಗಳು ಬಿರುಕುಬಿಟ್ಟಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಭಾರೀ ಮಳೆಯಿಂದ ಮಡಿಕೇರಿ ಬಳಿ ಮನೆ ಬಳಿಯೇ ಮಣ್ಣು ಕುಸಿದಿದ್ದು, ಕಗ್ಗೊಡ್ಲು ಬಳಿ ಸೇತುವೆಯ ಒಂದು ಬದಿ ಮಣ್ಣು ಕುಸಿದಿದೆ.
ಶನಿವಾರಸಂತೆ ಬಳಿ ರಸ್ತೆಯ ಎರಡು ಭಾಗದಲ್ಲಿ ಮಣ್ಣು ಕುಸಿದಿದ್ದು, ತೆರವು ಕಾರ್ಯ ನಡೆಸಲೂ ಕೂಡ ಮಳೆ ಅಡ್ಡಿಪಡಿಸುತ್ತಿದೆ.
ಇನ್ನೂ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಅಗತ್ಯ ವಸ್ತುಗಳನ್ನು ತರಲು ಕೂಡ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಗೋಳಂತೂ ಹೇಳತೀರದಾಗಿದೆ. ಗುಡ್ಡಗಾಡು ಪ್ರದೇಶಗಳಿಗೆ ಹೋಗಲು ವಾಹನಗಳಿಗೆ ಅಡಚಣೆ ಉಂಟಾಗುತ್ತಿದ್ದು, ಮನೆಯಲ್ಲಿ ಅಗತ್ಯ ವಸ್ತುಗಳು ಇಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಮ್ಮ ರಕ್ಷಣೆಗೆ ಧಾವಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…