ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಸುಮಾರು ೧೮,೦೦೦ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಹರಿಯಬಿಡಲಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದ್ದು, ಸ್ಥಳದಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮೇಲ್ಸೇತುವೆ ಮೂಲಕ ವಾಹನ ಸಂಚರಿಸುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ, ಮಳೆ ಮತ್ತಷ್ಟು ಹೆಚ್ಚಾದಲ್ಲಿ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.
ವರುಣನ ಆರ್ಭಟದಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಗುಹ್ಯ, ಕರಡಿಗೋಡು, ಕೂಡುಗದ್ದೆ, ಚೆರಿಯಪರಂಬು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸ್ಥಳಕ್ಕೆ ಅಽಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಪಾಯಕಾರಿ ಸ್ಥಳದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಽಯಲ್ಲಿ ೭೫.೬೭ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೮.೩೬ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೯೮೯.೫೧ ಮಿ.ಮೀ, ಕಳೆದ ವರ್ಷ ಇದೇ ಅವಽಯಲ್ಲಿ ೪೯೬.೪೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೧೨೨.೪೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೭೨.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೭೧.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೪.೩೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೪೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೯೦, ನಾಪೋಕ್ಲು ೮೮.೮೦, ಸಂಪಾಜೆ ೧೧೬, ಭಾಗಮಂಡಲ ೧೯೫, ವಿರಾಜಪೇಟೆ ೭೭.೨೦, ಅಮ್ಮತ್ತಿ ೬೭, ಹುದಿಕೇರಿ ೮೭.೬೦, ಶ್ರೀಮಂಗಲ ೫೬.೬೦, ಪೊನ್ನಂಪೇಟೆ ೮೦, ಬಾಳೆಲೆ ೬೦.೦೯, ಸೋಮವಾರಪೇಟೆ ೭೪, ಶನಿವಾರಸಂತೆ ೪೮, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೫.೪೦, ಕುಶಾಲನಗರ ೨೪.೮೦, ಸುಂಟಿಕೊಪ್ಪದಲ್ಲಿ ೫೨ ಮಿ.ಮೀ. ಮಳೆಯಾಗಿದೆ.
ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…