ಕೊಡಗು

ಮಳೆಗಾಲದಲ್ಲಿ ಕೊಡಗು ಜನತೆಯ ಬದುಕು ಹೇಗಿದೆ ಗೊತ್ತಾ.?

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.

ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್‌ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್‌ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.

ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.

ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago