ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ.
ಹಾಗೆಯೇ ಮುಂದಿನ ದಿನಗಳಲ್ಲಿ ಈ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಡ್ಯಾಂಗೆ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯ ಗರಿಷ್ಠ ನೀರಿನ ಮಟ್ಟ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವಂತಾಗಿದ್ದು, ಸದ್ಯ ಈಗ ಡ್ಯಾಂನಿಂದ ನದಿಗೆ 1 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರಿಂದು ಜಲಾಶಯದ 4 ಕ್ರಸ್ಟ್ ಗೇಟ್‌ಗಳಿಗೆ ಪೂಜೆ ಸಲ್ಲಿಸಿ ನೀರನ್ನು ಬಿಡುಗಡೆಗೊಳಿಸಿದರು. ಈ ವೇಳೆ ಜಲಾಶಯದ ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.