Mysore
23
broken clouds
Light
Dark

ಕೊಡಗಿನಲ್ಲಿ ಅಪಾರ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂ ನಷ್ಟ

ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ ಆರ್ಭಟಕ್ಕೆ ಮುರಿದು ಬಿದ್ದಿದ್ದ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ.

ಕೊಡಗಿನಲ್ಲಿ ಮಳೆ ಕೊಂಚ ಬಿಡುವು ನೀಡಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಉಂಟಾಗಿದ್ದ ಪ್ರವಾಹ ತಹಬದಿಗೆ ಬಂದಿದೆ. ಭೂಕುಸಿತದಿಂದ ಬಂದ್‌ ಆಗಿದ್ದ ಅನೇಕ ರಸ್ತೆಗಳನ್ನು ಈಗ ಸರಿಪಡಿಸಲಾಗಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇನ್ನೂ ಜಿಲ್ಲೆಯಾದ್ಯಂತ ಕಳೆದ ಎರಡು ವಾರಗಳಿಂದ ಸುರಿದ ಧಾರಾಕಾರ ಮಳೆಯಿಂದ ವಿದ್ಯುತ್‌ ಇಲಾಖೆಗೆ 4.25 ಕೋಟಿ ರೂ ನಷ್ಟವಾಗಿದೆ ಎಂದು ವಿದ್ಯುತ್‌ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಧರೆಗುರುಳಿದ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದ್ದು, ಇದರ ಮಧ್ಯೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಸೆಸ್ಕ್‌ ಮನವಿ ಮಾಡಿದೆ.

ಇನ್ನೂ ಧರೆಗುರುಳಿದ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು 500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕೊಡಗು ಜಿಲ್ಲೆ ಮಾತ್ರವಲ್ಲದೇ ಹೊರೆ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನದಿಂದಲೂ ಸಿಬ್ಬಂದಿಯನ್ನು ಕರೆತರಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.