ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.
ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ನಿಂತೇ ಹೋಯಿತೇನೋ ಎಂದು ಜನತೆ ಖುಷಿಪಡುವಷ್ಟರಲ್ಲಿ ಇಂದು ಮತ್ತೆ ವರುಣ ತನ್ನ ಆರ್ಭಟ ಶುರು ಮಾಡಿದ್ದಾರೆ.
ಭಾರೀ ಮಳೆಯಿಂದ ಕೊಡಗು ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಕೂಡ ಸಂಪೂರ್ಣ ಜಲಾವೃತವಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ.
ಇನ್ನೂ ಮಡಿಕೇರಿ ತಾಲ್ಲೂಕಿನಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿದ್ದು, ಬೇಂಗೂರು ಗ್ರಾಮದ ಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿತವಾಗಿದೆ.
ಮನೆ ಗೋಡೆ ಕುಸಿತದಿಂದ ಕಂಗಾಲಾಗಿರುವ ಲಿಂಗಪ್ಪ ಪೂಜಾರಿ, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು, ಸ್ಥಳಕ್ಕೆ ಬಾಋದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…