ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ.
ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆಗೆ ಬಿದ್ದಿದೆ.. ಇದರಿಂದಾಗಿ ಮಡಿಕೇರಿ ಹಾಗೂ ಗಾಳಿಬೀಡು ನಡುವಿನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆ ಸಂಪರ್ಕ ಸ್ಥಗಿತಗೊಂಡಿದ್ದು, ವಾಹನ ಸವಾರರು ಹಾಗೂ ಜನರ ಓಡಾಟಕ್ಕೆ ಅವಕಾಶವಿಲ್ಲದೇ ಪರದಾಡುವ ಆಗಿದೆ.
ಭಾರೀ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಈ ಭಾಗದಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಸ್ಥಗಿತಗೊಂಡಿದೆ. ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಕೆಇಬಿ ಅಧಿಕಾರಿಗಳು ದೌಡಾಯಿಸಿ ಮರ ತೆರವುಗೊಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಾದ್ಯಂತ ಒಂದೇ ದಿನದಲ್ಲಿ ಹತ್ತಾರು ಮನೆಗಳು ಧರೆಗುರುಳಿವೆ. ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕಿನಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಸೋಮವಾರಪೇಟೆ ತಾಲ್ಲೂಕಿನ ಹಲವೆಡೆ ಮನೆಯ ಗೋಡೆ ಕುಸಿತಗೊಂಡಿದೆ.
ಮಳೆಯಿಂದ ಮನೆ ಹಾನಿಯಾದ ಸ್ಥಳಗಳಿಗೆ ಆಯಾಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಗದೊಂದೆಡೆ ಮರದ ಕೊಂಬೆ ಬಿದ್ದು ಆರು ಕಾರುಗಳಿಗೆ ಹಾನಿಯಾಗಿದೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…