Mysore
19
overcast clouds
Light
Dark

ಕೊಡಗಿನ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.

ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ಮಳೆಯ ಆರ್ಭಟ ಜೋರಾಗಿದ್ದು, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಭಾರೀ ಮಳೆಯಿಂದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.

ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡ ಕುಸಿಯುವ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಇನ್ನು ಕೊಡಗಿನಲ್ಲಿ ನಾಳೆಯೂ ಕೂಡ ರೆಡ್‌ ಅಲರ್ಟ್‌ ಇರಲಿದ್ದು, ಜನತೆ ಭಾರೀ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಬಳಿ ಯಾರೂ ಕೂಡ ತೆರಳದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಭಾರೀ ಮಳೆಯಾಗುತ್ತಿರುವ ಪರಿಣಾಮ ಕೊಡಗಿನ ಪ್ರವಾಸಿ ತಾಣಗಳಿಗೆ ಯಾರು ಕೂಡ ಭೇಟಿ ನೀಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.