ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.
ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ಮಳೆಯ ಆರ್ಭಟ ಜೋರಾಗಿದ್ದು, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಭಾರೀ ಮಳೆಯಿಂದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.
ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡ ಕುಸಿಯುವ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಇನ್ನು ಕೊಡಗಿನಲ್ಲಿ ನಾಳೆಯೂ ಕೂಡ ರೆಡ್ ಅಲರ್ಟ್ ಇರಲಿದ್ದು, ಜನತೆ ಭಾರೀ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಬಳಿ ಯಾರೂ ಕೂಡ ತೆರಳದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಪರಿಣಾಮ ಕೊಡಗಿನ ಪ್ರವಾಸಿ ತಾಣಗಳಿಗೆ ಯಾರು ಕೂಡ ಭೇಟಿ ನೀಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…