ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ.
ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಗಾಳಿ-ಮಳೆಗೆ ಹಲವೆಡೆ ಬೃಹತ್ ಗಾತ್ರದ ಮರಗಳೇ ಧರೆಗುರುಳಿದ್ದು, ವಾಹನ ಸವಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಇದನ್ನೂ ಓದಿ:- ಬಿಜೆಪಿಯಿಂದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಉಚ್ಛಾಟನೆ
ಇನ್ನು ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡ ಕರಿಕೆ ನಡುವೆ ಎಳ್ಳುಕೊಚ್ಚಿ ಬಳಿ ರಸ್ತೆ ಬದಿಯಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕರಿಕೆ ಗ್ರಾಮ ಪಂಚಾಯತ್ ವತಿಯಿಂದ ಮಣ್ಣು ತೆರವು ಕಾರ್ಯ ಮಾಡಲಾಗಿದ್ದು, ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





