ಕೊಡಗು

ಕೊಡಗಿನಲ್ಲಿ ಮುಂಗಾರು ಚುರುಕು: ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ ಆಗಮನ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬಂದಿಳಿದಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನರ ಜೊತೆ ಜಿಲ್ಲಾಡಳಿತ ಮಳೆಗಾಲದ ಸವಾಲುಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಇದರ ಭಾಗವಾಗಿ ಜಿಲ್ಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಬಂದಿಳಿದಿದೆ. ತಂಡವು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದೆ.

ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ವಾಸಿಸುತ್ತಿರುವ ಜನರನ್ನು ಬೇರೆಡೆಗೆ ಶಿಫ್ಟ್‌ ಮಾಡಲಾಗಿದೆ.

ಮಳೆ ಮುಂದುವರಿದಿರುವ ಪರಿಣಾಮ ಕೊಡಗು ಜಿಲ್ಲಾಡಳಿತ ಮಳೆ ಸವಾಲು ಎದುರಿಸಲು ಸಜ್ಜಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದ್ದು, ಮುಂದಿನ ಮೂರು ತಿಂಗಳು ಇಲ್ಲಿಯೇ ಇದ್ದು ಮಳೆಗಾಲ ಎದುರಿಸಲು ಜಿಲ್ಲಾಡಳಿತಕ್ಕೆ ಸಹಕರಿಸಲಿದೆ.

ಕೊಡಗು ಜಿಲ್ಲೆಗೆ ಆಗಮಿಸಿದ ಎನ್‌ಡಿಆರ್‌ಎಫ್‌ ಯೋಧರು ಗುಡ್ಡ ಕುಸಿತ, ಪ್ರವಾಹದಂತಹ ಸಂದರ್ಭದಲ್ಲಿ ಜಿಲ್ಲೆಯ ಜನರ ಹಾಗೂ ಜಾನುವಾರುಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್‌ನ ರೀಜಿನಲ್‌ ರೆಸ್ಪಾನ್ಸ್‌ ಸೆಂಟರ್‌ನ 10ನೇ ಬೆಟಾಲಿಯನ್‌ನಲ್ಲಿರುವ 25 ಯೋಧರು ಇನ್ಸ್‌ಪೆಕ್ಟರ್‌ ಅಜಯ್‌ ಅವರ ನೇತೃತ್ವದಲ್ಲಿ ಬಂದಿಳಿದಿದ್ದಾರೆ. ಅಗತ್ಯ ಬಿದ್ದರೆ ಮತ್ತಷ್ಟು ಸಿಬ್ಬಂದಿ ಮತ್ತು ಸಲಕರಣೆಗಳನ್ನು ತರಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಂದು ವೇಳೆ ಮಳೆ ಪ್ರಮಾಣ ಜಾಸ್ತಿಯಾದರೆ ಐದು ತಾಲ್ಲೂಕುಗಳಲ್ಲಿಯೂ ಭೂಕುಸಿತವಾಗುವ ಸಾಧ್ಯತೆಯಿದೆ. 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಕಾಣಿಸಿಕೊಳ್ಳಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಅಂದಾಜು ಮಾಡಿದ್ದು, ಇಂತಹ ಜಾಗಗಳ ಪೈಕಿ ಹೆಚ್ಚು ಅಪಾಯಕಾರಿ ಪ್ರದೇಶಗಳಿಗೆ ತಂಡ ಭೇಟಿ ನೀಡಿ, ಜನತೆಗೆ ಧೈರ್ಯ ಹೇಳಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

49 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

51 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago