Mysore
33
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೆ ಆತಂಕ

ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಉಂಟಾಗಿದ್ದು, ಬೃಹತ್‌ ಗಾತ್ರದ ಮರಗಳೇ ಧರೆಗುರುಳಿವೆ.

ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಡಿಕೇರಿಯಲ್ಲಿ ಇಂದು ಕೂಡ ಭಾರೀ ಮಳೆ ಆಗುವ ಮುನ್ಸೂಚನೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಿಂದ ಭೂಕುಸಿತ, ಸೇತುವೆಗಳು ಹಾಗೂ ಹಲವಾರು ಮನೆಗಳು ಹಾನಿಯಾಗಿವೆ.

ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 2018ರ ಬಳಿಕ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದು, ಮಳೆ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೊಡಗು ಜಿಲ್ಲೆಯ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಇನ್ನೂ ಎರಡು ದಿನ ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!