ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಉಂಟಾಗಿದ್ದು, ಬೃಹತ್ ಗಾತ್ರದ ಮರಗಳೇ ಧರೆಗುರುಳಿವೆ.
ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಡಿಕೇರಿಯಲ್ಲಿ ಇಂದು ಕೂಡ ಭಾರೀ ಮಳೆ ಆಗುವ ಮುನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಿಂದ ಭೂಕುಸಿತ, ಸೇತುವೆಗಳು ಹಾಗೂ ಹಲವಾರು ಮನೆಗಳು ಹಾನಿಯಾಗಿವೆ.
ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 2018ರ ಬಳಿಕ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದು, ಮಳೆ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೊಡಗು ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಇನ್ನೂ ಎರಡು ದಿನ ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…