ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಉಂಟಾಗಿದ್ದು, ಬೃಹತ್ ಗಾತ್ರದ ಮರಗಳೇ ಧರೆಗುರುಳಿವೆ.
ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಡಿಕೇರಿಯಲ್ಲಿ ಇಂದು ಕೂಡ ಭಾರೀ ಮಳೆ ಆಗುವ ಮುನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಿಂದ ಭೂಕುಸಿತ, ಸೇತುವೆಗಳು ಹಾಗೂ ಹಲವಾರು ಮನೆಗಳು ಹಾನಿಯಾಗಿವೆ.
ಇನ್ನೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 2018ರ ಬಳಿಕ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದು, ಮಳೆ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೊಡಗು ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಇನ್ನೂ ಎರಡು ದಿನ ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಠ್ಮಂಡು: ನೇಪಾಳದ ಭೀಕರ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 213 ಭಾರತೀಯರನ್ನು ಕಾನೂನುಬದ್ಧವಾಗಿ ಮೃತಪಟ್ಟಿದ್ದಾರೆಂದು ಘೋಷಿಸುವ ಪ್ರಕ್ರಿಯೆಯನ್ನು ಅಲ್ಲಿನ ಸರ್ಕಾರ ಆರಂಭಿಸಿದೆ ಎಂದು…
ನವದೆಹಲಿ: ಸಂಸತ್ತಿನ ಉಭಯ ಸದನಗಳು ಮತ್ತೆ ಸಮಾವೇಶಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ. ನವೆಂಬರ್ 30ರ ಸೋಮವಾರ ಬೆಳಗ್ಗೆ ಲೋಕಸಭೆ…
ಹಾಸನ: ಜನರು ಓಡಾಡುವ ರಸ್ತೆಯಲ್ಲೇ ಹಾಡಹಗಲು ಎರಡು ಚಿರತೆಗಳು ಕಾಣಿಸಿಕೊಂಡಿವೆ. ಈ ಘಟನೆ ನಡೆದದ್ದು ಹಾಸನ ತಾಲೂಕಿನ ನಿಡುಡಿ ಗ್ರಾಮದ…
ಬೆಂಗಳೂರು: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 38 ವರ್ಷದ ಗಂಗಾ ತಡರಾತ್ರಿ…
ಬೆಂಗಳೂರು: ಮೈಸೂರು ಸೇರಿದಂತೆ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕೆಎಸ್ಆರ್ಟಿಸಿ ಬಸ್ಗಳು ಸೂಕ್ತ ನಿರ್ವಹಣೆ ಇಲ್ಲದೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಕೆಲವು ಬಸ್ಗಳಂತೂ…