ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಭಾರೀ ಮಳೆಯಾಗುವ ಸಾಧ್ಯತೆ ಇರುವುರದಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.