Mysore
20
overcast clouds
Light
Dark

ಕೊಡಗಿನಲ್ಲಿ ಮತ್ತೆ ಮಳೆಯ ಆರ್ಭಟ: ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ.

ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಆರ್ಭಟಿಸುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಡಿಕೇರಿಯಲ್ಲಿ ಜೋರು ಮಳೆಯಾಗುತ್ತಿದ್ದು, ಗಾಳಿಯೂ ಕೂಡ ಹೆಚ್ಚಾಗಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಮಕ್ಕಳು ಮನೆಯಲ್ಲಿಯೇ ಸುರಕ್ಷತೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನೂ ಮಳೆಯ ಆರ್ಭಟ ಮೂರು ದಿನಗಳ ಕಾಲ ಮುಂದುವರಿಯಲಿದ್ದು, ಬೆಟ್ಟ ಗುಡ್ಡಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೂರುವ ಪರಿಸ್ಥಿತಿ ನಿರ್ಮಾಣವಾಗಲಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.