ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇನ್ನೂ ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಅಲ್ಲಲ್ಲಿ ರಸ್ತೆ, ಗುಡ್ಡಗಳು ಕುಸಿದಿದ್ದು, ಭಾರೀ ಮಳೆಯಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ.
ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.