ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಡಿಕೇರಿ ನಗರ, ನಾಪೋಕ್ಲು, ಸೋಮವಾರಪೇಟೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಧಾರಾಕಾರ ಮಳೆಯ ಜೊತೆಗೆ ರಭಸವಾಗಿ ಗಾಳಿ ಬೀಸುತ್ತಿದ್ದು, ಮರಗಳು ಕೂಡ ಧರೆಗುರುಳುತ್ತಿವೆ. ಗಾಳಿಗೆ ಹಲವಾರು ವಿದ್ಯುತ್ ಕಂಬಗಳು ಕೂಡ ನೆಲಕಚ್ಚಿವೆ. ಬೀಸುತ್ತಿರುವ ಶೀತಗಾಳಿ ಹಾಗೂ ಕವಿಯುತ್ತಿರುವ ದಟ್ಟ ಮಂಜಿನಿಂದ ಜನರು ಕಂಗಾಲಾಗಿದ್ದು, ಶೀತಮಯ ವಾತಾವರಣದಲ್ಲಿ ಬಸವಳಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಳೆ ಇನ್ನೂ ಮೂರು ದಿನ ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಧಾರಾಕಾರ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ ಬಳಿಗೆ ಯಾರೂ ಕೂಡ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವಾಚ್ಯ…
ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಸೇನೆ ಹಾಗೂ ಜಮ್ಮು–ಕಾಶ್ಮೀರ…
ಹಾಸನ: ಮೂರು ದಿನಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ! ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ. ನಾಗೇನಹಳ್ಳಿ…
ಕೊಡಗು: ಗುಜರಾತ್ ಮೂಲದ ದಂಪತಿಯನ್ನು ಬಲಿ ಪಡೆದ ಸ್ಪೀಡ್ ಬೋಟ್ ದುರಂತದ ಬೆನ್ನಲ್ಲೇ, ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳನ್ನು…
ಮಂಡ್ಯ: ಜಿಲ್ಲೆಯ ಪ್ರಸಿದ್ಧ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ನವೆಂಬರ್ 17ರ ರಾತ್ರಿ 7 ಗಂಟೆಗೆ ಅದ್ಧೂರಿ ರಾಜಮುಡಿ ಕಿರೀಟಧಾರಣಾ ಮಹೋತ್ಸವ ನಡೆಯಲಿದೆ.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊನ್ನೆ ಮೈಸೂರಿಗೆ ಆಗಮಿಸಿದ್ದಾಗ ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆ ಮತ್ತೆ ಸುದ್ದಿಯಾಯಿತು. ಪ್ರಧಾನಮಂತ್ರಿಗಳ ಸಮ್ಮುಖದ…