ಕೊಡಗು: ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ ಇಂದಿನಿಂದ ಮಳೆ ಸಕ್ರಿಯಗೊಂಡಿದ್ದು, ಮಡಿಕೇರಿ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗಿದೆ.
ಇನ್ನೂ ವಾರಾಂತ್ಯದಲ್ಲಿ ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಲವೆಡೆ ಗಾಳಿ ಜೊತೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿದಂತೆ ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ನಿರಂತರ ಗಾಳಿ ಜೊತೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…