ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ.
ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ ಪ್ರಾಥಾಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇತ್ತ ಜೋರು ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ವಿಪರೀತ ಮಳೆಯಿಂದಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ಹೆಚ್ಚಿನ ಮಳೆಯಿಂದಾಗಿ ಪ್ರವಾಹದ ಭೀತಿ ಉಂಟಾಗಿದ್ದು, ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಜಿಲ್ಲಾಡಳಿತ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದೆ.
ಜಿಲ್ಲೆಯ ಹಲವೆಡೆ ಮಣ್ಣು ಕುಸಿತ, ತೀವ್ರ ಪ್ರವಾಹದ ಮುನ್ಸೂಚನೆ ಕಂಡುಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸಕಲ ಸಿದ್ದತೆಗಳೊಂದಿಗೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.





