ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿರಾಜಪೇಟೆ, ಮಡಿಕೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಿಂದ ತಲಕಾವೇರಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.