ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗಲಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಡ್ಯಾಂಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





