ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್ ಬಳಸಲು ಅವಕಾಶವಿದೆ. 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳ ಬಳಕೆ ಇರಲಿದೆ. 10 ಗಂಟೆಯ ನಂತರ ಧ್ವನಿ ವರ್ಧಕಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೊಸ ವರ್ಷ ಮಾಡಿ, ಸೀಮಿತ ಡೆಸಿಬಲ್‌ನಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ.
ಹೋಂ ಸ್ಟೇಗಳ ಸಂಪೂರ್ಣ ಜವಾಬ್ದಾರಿ ಹೋಂ ರೆಸಾರ್ಟ್ ಮಾಲೀಕರದ್ದಾಗಿದೆ. ನಿಯಮ ಮೀರಿದಲ್ಲಿ ಮಾಲೀಕರನ್ನೇ ನೇರ ಹೊಣೆ ಮಾಡಲಾಗುವುದು. ಅನುಮಾನ ಬಂದಲ್ಲಿ ಕೂಡ ಯಾವುದೇ ಕ್ಷಣದಲ್ಲಿ ತಪಾಸಣೆ ಮಾಡಲಾಗುವುದು ಎಂದು ಕೊಡಗು ಎಸ್ಪಿ ರಾಮರಾಜನ್ ಖಡಕ್ ಸೂಚನೆ ನೀಡಿದ್ದಾರೆ.





