ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 18 ರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 6 ಗಂಟೆ ವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ರಸ್ತೆ ಸಂಚಾರ ನಿಷೇಧಕ್ಕೆ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ತೀವ್ರ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿವ ಕರ್ತೋಜಿ ಪ್ರದೇಶದಲ್ಲಿ ತುರ್ತು ಸೇವೆ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ಅಧಿಕಾರಿ ಸಂಚರಿಸುವ ವಾಹನ ಹೊರತುಪಡಿಸಿ, ಇನ್ನುಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…