Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಕಾರು, ಆಟೋ ಹಾಗೂ ಬೈಕ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಅನೀಲ್‌ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ನೇಹಿತನ ಹುಟ್ಟುಹಬ್ಬದ ಪ್ರಯುಕ್ತ ವಿನಯ್‌ ಕುಶಾಲನಗರದಿಂದ ಬೈಲಕುಪ್ಪೆಗೆ ಕೇಕ್‌ ತರಲು ಅಗಮಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಮೈಸೂರಿನಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ಅಪರಿಚಿತ ಕಾರೊಂದು ಆಟೋಗೆ ಡಿಕ್ಕಿ ಹೊಡೆದು, ಆಟೋ ಬೈಕಿಗೆ ಅಪ್ಪಳಿಸಿ, ವಿನಯ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಈ ಸಂಬಂಧ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!