ಕೊಡಗು: ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ತಲಕಾವೇರಿ, ರಾಜಾಶೀಟ್, ಭಗಂಡೇಶ್ವರ ದೇವಸ್ಥಾನ, ಮಾಂದಲ್ ಪಟ್ಟಿ ವ್ಯೂ ಪಾಯಿಂಟ್, ಹಾರಂಗಿ ವೃಕ್ಷೋದ್ಯಾನ, ದುಬಾರೆ ಆನೆ ಶಿಬಿರ, ಚಿಕ್ಲಿಹೊಳೆ ಜಲಾಶಯ, ಹಾರಂಗಿ ಜಲಾಶಯ, ಅಬ್ಬಿ ಜಲಪಾತದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಕೊಡಗಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಭಾರೀ ಮಳೆಯಿಂದ ಅಪಾರ ಹಾನಿಗೊಳಗಾಗಿದ್ದ ಕೊಡಗು ಜಿಲ್ಲೆಗೆ ಪ್ರವಾಸಿಗರು ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಈಗ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾಲು ಸಾಲು ರಜೆ ಇದ್ದ ಅಂಗವಾಗಿ ಕೊಡಗು ಜಿಲ್ಲೆಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಡಗು ಪ್ರವಾಸೋದ್ಯಮ ಚೇತರಿಕೆ ಕಾಣುತ್ತಿದ್ದು, ವ್ಯಾಪಾರಿಗಳ ಆದಾಯದಲ್ಲೂ ಚೇತರಿಕೆ ಕಾಣುತ್ತಿದೆ.