Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಮಡಿಕೇರಿ : ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ನಾಳೆ (ಅ.17) ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಜಿಲ್ಲಾಡಳಿತ ವತಿಯಿಂದ ಅಗತ್ಯ ಸಿದ್ಧತೆ ನಡೆದಿದೆ.

ತಲಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತಾಽಗಳ ಅನುಕೂಲಕ್ಕೆ ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗಿದೆ. ಭಕ್ತಾಧಿಗಳು ತೀರ್ಥ ಪಡೆಯಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ವೇದಿಕೆ ನಿರ್ಮಾಣ ಮಾಡಲಾಗಿದೆ. ಕೊಡಗು ಏಕೀಕರಣ ರಂಗದಿಂದ ಭಕ್ತಾಽಗಳ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ.

ಇದನ್ನೂ ಓದಿ:-ಸಿಎಂ ಕಾವೇರಿ ನಿವಾಸದಲ್ಲಿ ಸಮೀಕ್ಷೆ : ವಿವರ ನೀಡಿದ ಸಿಎಂ

ಪರಿಸರ ಶುಚಿತ್ವ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳನ್ನು ಕೈಗೊಂಡಿದ್ದಾರೆ. ಗಣ್ಯರು, ಅತಿಥಿಗಳು, ಪತ್ರಕರ್ತರು ತೆರಳಲು ಪ್ರತ್ಯೇಕ ಬ್ಯಾರಿಕೇಡ್ ಅಳವಡಿಸಲಾಗಿದೆ. ತಲಕಾವೇರಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಎಲ್‌ಇಡಿ ವಾಲ್‌ಗಳ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಎಸ್‌ಪಿ ಹಾಗೂ ಎಎಸ್‌ಪಿ ಸೇರಿದಂತೆ ಮೂವರು ಡಿವೈಎಸ್‌ಪಿ, ೮ ಪೊಲೀಸ್ ಇನ್ಸ್‌ಪೆಕ್ಟರ್, ೨೧ ಪಿಎಸ್‌ಐ, ೪೧ ಎಎಸ್‌ಐ, ೨೩೮ ಹೆಡ್ ಕಾನ್ಸ್‌ಟೇಬಲ್, ೫೨ ಡಬ್ಲ್ತ್ಯ್ಯುಪಿಸಿ, ೨ ಕೆಎಸ್‌ಆರ್‌ಪಿ, ೪ ಡಿಎಆರ್ ಇತರರನ್ನು ನಿಯೋಜಿಸಿ, ಅಗತ್ಯ ಬಂದೋಬಸ್ತ್ ಮಾಡಲಾಗಿದೆ.

ಈ ಬಾರಿ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಾರೆ. ಜೊತೆಗೆ, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಡಾ.ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಕ್ರೀಡಾ ಪ್ರಾಽಕಾರದ ಉಪಾಧ್ಯಕ್ಷ ಸಿ.ಎಚ್.ಅರುಣ್ ಮಾಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

Tags:
error: Content is protected !!