ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದಲ್ಲಿ ಬುಧವಾರ ( ಏಪ್ರಿಲ್ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ ಸೆರೆಗೆ ಗುರುವಾರ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಸಾಕು ಆನೆ ಜತೆಗೆ 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ. ಅರಣ್ಯಾಧಿಕಾರಿ ಕನ್ನಂಡ ರಂಜನ್, ಮಾವುತ ಕುಳ್ಳ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭೀಮ ಹೆಸರಿನ ಆನೆ ಮೇಲೆ ಜೇನು ಹುಳುಗಳು ಎರಗಿದೆ. ಹೆಜ್ಜೇನು ದಾಳಿಗೆ ಬೆದರಿ ಆನೆ ಭೀಮ ಓಡಿದೆ.
ಸದ್ಯ ಅಸ್ವಸ್ಥ ಅರಣ್ಯಾಧಿಕಾರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…