ಮಡಿಕೇರಿ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಮಡಿಕೇರಿಯ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ.
ಆನಂದಪುರದ ನಿವಾಸಿ 55 ವರ್ಷದ ಡಾಲ್ದನ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿಯಲ್ಲಿದ್ದ ಜೇಖರ್ ವಿಲ್ಲಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:- ಹಾಸ್ಯ ನಟ ರಾಕೇಶ್ ಪೂಜಾರಿ (34) ನಿಧನ
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





