ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ.
ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ.
ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿತದಿಂದ ಗುರುವ ಪೌತಿ ಬಾಬು ಅವರು ಈಗ ಕಂಗಾಲಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.





