ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭಾರೀ ಅನಾಹುತಗಳೇ ಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ.
ಇನ್ನು ಭಾರೀ ಗಾಳಿ ಮಳೆಯಿಂದ ಪೊನ್ನಂಪೇಟೆ ಹೋಬಳಿಯ ಹುದೂರು ಗ್ರಾಮದ ನಿವಾಸಿ ರವಿ ಎಂಬುವವರ ವಾಸ ಮನೆಯ ಗೋಡೆ ಕುಸಿತವಾಗಿದೆ.
ಗೋಡೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರವಿ ಅವರು, ವಾಸ ಮಾಡಲು ಸೂರಿಲ್ಲದೇ ಪರದಾಟ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.





