Mysore
28
clear sky

Social Media

ಗುರುವಾರ, 12 ಮಾರ್ಚ್ 2026
Light
Dark

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಜೋಡಿಯನ್ನು ಕುಂಞರಾಮ(೫೫) ಹಾಗೂ ಯಶೋಧ(೪೫) ಎಂದು ಗುರುತಿಸಲಾಗಿದೆ. ಯಶೋಧ ಅವರ ಸೋದರ ಚಂದು(೭೦) ತನ್ನ ಸಹೋದರಿ ಆಕೆಯ ಸಂಗಾತಿಯನ್ನು ಕೊಲೆ ಮಾಡಿದ್ದಾನೆ.

ಕುಂಞರಾಮ ಮತ್ತು ಯಶೋಧ ಕಳೆದ ೨ ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದೇ ವಿಷಯಕ್ಕೆ ಯಶೋಧ ಸಹೋದರ ಆಗಾಗ ಗಲಾಟೆ ಮಾಡುತ್ತಿದ್ದ. ಬುಧವಾರ ಸಂಜೆಯೂ ಅದೇ ರೀತಿ ಕುಡಿದು ಮೂವರು ಗಲಾಟೆ ಮಾಡಿದ್ದಾರೆ. ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಕುಡಿದು ಬಂದು ಗಲಾಟೆ ಮಾಡಿದ ಚಂದು ಬಳಿಕ ಇಬ್ಬರನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಕೃತ್ಯ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಡಿವೈಎಸ್‌ಪಿ ಪಿ.ಎ. ಸೂರಜ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐ ರಾಘವೇಂದ್ರ, ಸಿಬ್ಬಂದಿಗಳು ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಗೆ ಸಂಬಂಧಿಸಿದಂತೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

 

 

Tags:
error: Content is protected !!