ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಜೋಡಿಯನ್ನು ಕುಂಞರಾಮ(೫೫) ಹಾಗೂ ಯಶೋಧ(೪೫) ಎಂದು ಗುರುತಿಸಲಾಗಿದೆ. ಯಶೋಧ ಅವರ ಸೋದರ ಚಂದು(೭೦) ತನ್ನ ಸಹೋದರಿ ಆಕೆಯ ಸಂಗಾತಿಯನ್ನು ಕೊಲೆ ಮಾಡಿದ್ದಾನೆ.
ಕುಂಞರಾಮ ಮತ್ತು ಯಶೋಧ ಕಳೆದ ೨ ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದೇ ವಿಷಯಕ್ಕೆ ಯಶೋಧ ಸಹೋದರ ಆಗಾಗ ಗಲಾಟೆ ಮಾಡುತ್ತಿದ್ದ. ಬುಧವಾರ ಸಂಜೆಯೂ ಅದೇ ರೀತಿ ಕುಡಿದು ಮೂವರು ಗಲಾಟೆ ಮಾಡಿದ್ದಾರೆ. ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಕುಡಿದು ಬಂದು ಗಲಾಟೆ ಮಾಡಿದ ಚಂದು ಬಳಿಕ ಇಬ್ಬರನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಕೃತ್ಯ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಡಿವೈಎಸ್‌ಪಿ ಪಿ.ಎ. ಸೂರಜ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐ ರಾಘವೇಂದ್ರ, ಸಿಬ್ಬಂದಿಗಳು ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…