Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಭ್ರಾತೃತ್ವ ಬೆಳೆಸಿ, ಭಾರತೀಯರಾಗಿ ಬದುಕಬೇಕು

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು.

ಕೊಡಿಗಿನ ಅಭಿವೃದ್ಧಿಗೆ ಅನುದಾನ

ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು.

 

Tags:
error: Content is protected !!