ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ.
ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ.
ಹೆಚ್ಚಾದ ಮಳೆಯಿಂದಾಗಿ ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಒಳ ಹರಿವಿನಲ್ಲಿ ಭಾರೀ ಬದಲಾಣೆ ಉಂಟಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಮಟ್ಟ 5,048 ಕ್ಯೂಸೆಕ್ ಏರಿಕೆಯಾಗಿದೆ ಎಂದು ವರದಿಯಾಗಿದೆ.