ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ಲಾಯರ್‌ಗೆ ಆರು ತಿಂಗಲ ಕಾಲ ಬಾರ್ ಕೌನ್ಸಿಲ್‌ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಸರ್ವಜನಾಂಗದ ಒಕ್ಕೂಟ ಬಂದ್‌ಗೆ ಕರೆ ನೀಡಿದೆ.
ಜಿಲ್ಲೆಯ ಅನುದಾನಿತ ಶಾಲಾ, ಕಾಲೇಜಿಗೆ ರಜೆ ಘೋಷಿಸಿದ್ದರು, ಬಹುತೇಕ ಖಾಸಗಿ ಶಾಲೆಗಳು ಎಂದಿನಂತೆ ತೆರೆದಿವೆ. ವಿವಿಧ ಸಂಘ ಸಂಸ್ಥಗಳು ಬಂದ್‌ಗೆ ಬೆಂಬಲ ನೀಡಿವೆ. ಇಂದು ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಮಾಡಲಾಗಿತ್ತು.
ಕುಶಾಲನಗರ, ವಿರಾಜಪೇಟೆಯಲ್ಲಿ ಬಂದ್‌ಗೆ ಉತ್ತಮ ಸ್ಪಂದನೆ ದೊರಕಿದೆ. ನಾಪೋಕ್ಲು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಸೋಮವಾರ ಪೇಟೆ, ಕೊಡ್ಲಿಪೇಟೆಯಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟು ತೆರಿದಿದ್ದು, ಬಸ್ ಸಂಚಾರ ಬೆರಳೆಣಿಕೆಯಲ್ಲಿವೆ. ಮಡಿಕೇರಿಯ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಮುಚ್ಚಿದ್ದು, ಮಾರ್ಕೆಟ್ ಒಳಭಾಗದಲ್ಲಿ ಮಾಂಸದ ಅಂಗಡಿಗಳು ಹಾಗು ಕೆಲವೊಂದು ರೆಸ್ಟೋರೆಂಟ್ ಗಳು ತೆರೆದಿದೆ. ಇನ್ನು ಬೆರಳೆಣಿಕೆಯ ಆಟೋ ರಿಕ್ಷಾ ಸಂಚಾರ ಎಂದಿನಂತಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…