ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ ಮೊದಲು ನಮಗೆ ರಾಜ್ಯದ ರೈತರ ಮತ್ತು ಜನರ ಹಿತಾಸಕ್ತಿಯೇ ಮುಖ್ಯ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ರೈತರ ಹಿತ ಬಲಿಕೊಡಲು ಸಾಧ್ಯವಿಲ್ಲ, ನೀರು ಬಿಡಬೇಕೋ ಬೇಡವೋ ಎಂಬುದು ಪ್ರಕೃತಿಯ ಮೇಲೆ ಆಧಾರಿತವಾಗಿರುತ್ತದೆ. ಈಗಾಗಲೇ ಕಾವೇರಿ ಜಲಾಶಯದ ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಲ್ಲದೇ ಈಗಾಗಲೇ ಐಸಿಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿಯೂ ರೈತರಿಗಾಗಿ ನಾಲೆಗಳಿಗೆ ನೀರು ಯಾವಾಗ ಹರಿಸಬೇಕೆಂದು ನಿರ್ಧರಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಮುಂದುವರೆದು ಭಗವಾನ್ ಕೂಬಾ ಅವರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೂಬಾ ಅವರ ನಡೆ ಪಕ್ಷದ ಸಂಸ್ಕøತಿಯನ್ನು ಬಿಂಬಿಸುತ್ತದೆ. ಮುಖ್ಯಮಂತ್ರಿಯಾಗಲು ಎಷ್ಟು ಕೊಡಬೇಕು, ಮಂತ್ರಿಗಳಾಗಲು ಎಷ್ಟು ಕೊಡಬೇಕು ಎಂದು ಅವರ ಸದಸ್ಯರೇ ಓಪನ್ ಆಗಿ ಮಾತಾಡಿದ್ದಾರೆ. ನಮ್ಮದು ಶಿಸ್ತಿನ ಪಕ್ಷ ಮತ್ತು ದೇಶ ರಕ್ಷಣೆಯ ಪಕ್ಷ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಕಚ್ಚಾಡುವ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.