ಕೊಡಗು

ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ : ಭೋಸರಾಜ್

ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ ಮೊದಲು ನಮಗೆ ರಾಜ್ಯದ ರೈತರ ಮತ್ತು ಜನರ ಹಿತಾಸಕ್ತಿಯೇ ಮುಖ್ಯ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. 

ರಾಜ್ಯದ ರೈತರ ಹಿತ ಬಲಿಕೊಡಲು ಸಾಧ್ಯವಿಲ್ಲ, ನೀರು ಬಿಡಬೇಕೋ ಬೇಡವೋ ಎಂಬುದು ಪ್ರಕೃತಿಯ ಮೇಲೆ ಆಧಾರಿತವಾಗಿರುತ್ತದೆ. ಈಗಾಗಲೇ ಕಾವೇರಿ ಜಲಾಶಯದ ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಲ್ಲದೇ ಈಗಾಗಲೇ ಐಸಿಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿಯೂ ರೈತರಿಗಾಗಿ ನಾಲೆಗಳಿಗೆ ನೀರು ಯಾವಾಗ ಹರಿಸಬೇಕೆಂದು ನಿರ್ಧರಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಂದುವರೆದು ಭಗವಾನ್ ಕೂಬಾ ಅವರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೂಬಾ ಅವರ ನಡೆ ಪಕ್ಷದ ಸಂಸ್ಕøತಿಯನ್ನು ಬಿಂಬಿಸುತ್ತದೆ. ಮುಖ್ಯಮಂತ್ರಿಯಾಗಲು ಎಷ್ಟು ಕೊಡಬೇಕು, ಮಂತ್ರಿಗಳಾಗಲು ಎಷ್ಟು ಕೊಡಬೇಕು ಎಂದು ಅವರ ಸದಸ್ಯರೇ ಓಪನ್ ಆಗಿ ಮಾತಾಡಿದ್ದಾರೆ. ನಮ್ಮದು ಶಿಸ್ತಿನ ಪಕ್ಷ ಮತ್ತು ದೇಶ ರಕ್ಷಣೆಯ ಪಕ್ಷ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಕಚ್ಚಾಡುವ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.

lokesh

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

3 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

3 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

3 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

3 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

3 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

4 hours ago