Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಜನಸ್ಪಂದನ ಸಭೆ ನಡೆಸಿ ಸ್ಥಳದಲ್ಲೇ ಹಕ್ಕುಪತ್ರ ವಿತರಿಸಿದ ಮಡಿಕೇರಿ ಶಾಸಕ ಮಂತರ್ ಗೌಡ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು.

ಕುಶಾಲನಗರದ ಎಪಿಸಿಎಂಎಸ್‌ ಸಭಾಂಗಣದಲ್ಲಿ ಶಾಸಕ ಮಂತರ್‌ ಗೌಡ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಲೋಕೋಪಯೋಗಿ, ಸೆಸ್ಕ್‌, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರಿಗೆ ಇದ್ದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದ ಶಾಸಕರು, ಅರ್ಹ ವೃದ್ಧರಿಗೆ ವೃದ್ಧಾಪ್ಯ ವೇತನದ ಪತ್ರಗಳನ್ನು ವಿತರಣೆ ಮಾಡಿದರು. ಅಲ್ಲದೇ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಣೆ ಮಾಡಿದರು.

ಜನಸ್ಪಂದನಾ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಮಂತರ್‌ ಗೌಡ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿಕೊಡುತ್ತೇವೆ ಎಂಬ ಸಬೂಬುಗಳು ಬೇಡ. ಕೆಲಸ ಆಗುವುದಿದ್ದಲ್ಲಿ ಕೂಡಲೇ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!